ಅಂತರ್ ಕಾಲೇಜು ಮಹಿಳಾ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ 2025-26




ಇಲಕಲ್ಲ : ಸ್ಥಳೀಯ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಶ್ರೀ ವಿಜಯ ಮಹಾಂತೇಶ ಕಲೆ ಹಾಗೂ ವಾಣಿಜ್ಯ ಮಹಿಳಾ ಪದವಿ ಮಹಾವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ವಿಜಯಪುರ ಸಹಯೋಗದಲ್ಲಿ ಅಂತರ್ ಕಾಲೇಜು ಶೆಟಲ್ ಬ್ಯಾಡ್ಮಿಂಟನ್ ಪಮದ್ಯಾವಳಿಗೆ ಚಾಲನೆ ನೀಡಲಾಯಿತು.
ಎಸ್.ವ್ಹಿ.ಎಂ.ವಿ.ವಿ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಡಿ. ಎನ್. ದೇವಗಿರಿಕರ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿ ಜೀವನದ ಕರ್ತವ್ಯವನ್ನು ಸಮರ್ಪಕವಾಗಿ ನಿಭಾಯಿಸಿ ತಮ್ಮ ಪೋಷಕರಿಗೆ, ತಮಗೆ ಶಿಕ್ಷಣ ನೀಡಿದ ಸಂಸ್ಥೆಗೆ ಕೀರ್ತಿಯನ್ನು ತರಬೇಕು. ಕಲಿಕೆ ಮತ್ತು ಕ್ರಮಬದ್ಧವಾದ ಜೀವನ ಉತ್ತಮ ಸಂಸ್ಕಾರವನ್ನು ಕಲಿಸುತ್ತದೆ. ಮಾತ್ರವಲ್ಲ ಸಮಾಜದಲ್ಲಿ ಉನ್ನತ ಸ್ಥಾನವನ್ನು ತಲುಪಲು ಪ್ರೇರೇಪಿಸುತ್ತದೆ ಎಂದರು.
ಪ್ರಾಚಾರ್ಯರಾದ ಪ್ರೊ. ಬಿ. ಬಿ. ಸುಗ್ಗಮದ ಪ್ರಾಸ್ತಾವಿಕವಾಗಿ ಮಾತನಾಡಿ, ಅಂತರ್ ಕಾಲೇಜು ಕ್ರೀಡಾಕೂಟವು, ಅಂತರಾಷ್ಟಿçÃಯ ಮಟ್ಟದ ಕ್ರೀಡಾಪಟುಗಳನ್ನು ಬೆಳೆಸಲು ಸಾಧ್ಯ ಮತ್ತು ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಇವೆರಡನ್ನು ಸಮಾನವಾಗಿ ಸ್ವೀಕರಿಸಿ ಮುಂದುವರೆಯಬೇಕು ಎಂದು ಹೇಳಿ ಕ್ರೀಡಾಪಟುಗಳಿಗೆ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕ.ರಾ.ಅ.ಮ. ವಿಶ್ವವಿದ್ಯಾಲಯದ ಸಹಾಯಕ ದೈಹಿಕ ನಿರ್ದೇಶಕರಾದ ಡಾ. ವಿಶ್ವನಾಥ ನಡಕಟ್ಟಿಯವರು ಮಾತನಾಡಿ, ವಿದ್ಯಾರ್ಥಿಯ ಜೀವನದಲ್ಲಿ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ. ಪ್ರತಿಯೊಬ್ಬರು ಕ್ರೀಡೆಯಲ್ಲಿ ಭಾಗವಹಿಸಿ ಸದೃಢ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದರು.
ಸಮಾರAಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಚೇರಮನ್ನರಾದ ಶ್ರೀ. ಬಿ. ಎಮ್. ಕಬ್ಬಿಣದ ಸಾಂದರ್ಭಿಕವಾಗಿ ಮಾತನಾಡಿ, ಕ್ರೀಡಾ ಸಾಧಕರು ನಡೆದು ಬಂದ ದಾರಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವಾಗಲಿ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಎಸ್. ಆರ್. ಕಂಠಿ ಬಾಲಕಿಯರ ಪ್ರೌಢಶಾಲೆಯ ಚೇರಮನ್ನರಾದ ಶ್ರೀ. ಪಿ.ಎಸ್. ಪಟ್ಟಣಶೆಟ್ಟಿ, ಮಹಾವಿದ್ಯಾಲಯದ ದೈಹಿಕ ನಿರ್ದೇಶಕರಾದ ಶ್ರೀ ಜಿ. ಜಿ. ಕವಡಿಮಟ್ಟಿ, ಕ್ರೀಡಾ ಸಂಚಾಲಕರಾದ ಪ್ರೊ. ಎಸ್. ಎಸ್. ಪಾಟೀಲ, ವಿದ್ಯಾರ್ಥಿ ಒಕ್ಕೂಟದ ಚೇರಮನ್ನರಾದ ಪ್ರೊ. ಶ್ರೀಮತಿ ಎ. ಸಿ. ದಟ್ಟಿ, ಐ.ಕ್ಯೂ.ಎ.ಸಿ ಸಂಯೋಜಕರಾದ ಪ್ರೊ. ಪಿ. ಆರ್. ಪಾಟೀಲ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕು. ಅಶ್ವಿತಾ ಪ್ರಾರ್ಥಿಸಿದರು. ಆಂಗ್ಲ ವಿಭಾಗದ ಮುಖ್ಯಸ್ಥರಾದ ಪ್ರೊ. ಟಿ. ಎಂ. ಕುಲಕರ್ಣಿ ಸ್ವಾಗತಿಸಿ ಅತಿಥಿಗಳನ್ನು ಪರಿಚಯಿಸಿದರು. ಕಾರ್ಯಕ್ರಮವನ್ನು ಪ್ರೊ. ಡಿ. ಬಿ. ಮಾಗಿ ಹಾಗೂ ಪ್ರೊ. ಶಶಿಕಲಾ ಓದಾ ಅವರು ನಿರೂಪಿಸಿದರು. ಕ್ರೀಡಾ ಸಂಚಾಲಕರಾದ ಪ್ರೊ. ಎಸ್. ಎಸ್. ಪಾಟೀಲ ವಂದಿಸಿದರು.
