ಮಹಾವಿದ್ಯಾಲಯದಲ್ಲಿ ವ್ಯಸನಮುಕ್ತ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ. ದಿನಾಂಕ: 25-07-2025




ಮಹಾವಿದ್ಯಾಲಯದಲ್ಲಿ ವ್ಯಸನಮುಕ್ತ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ.
ದಿನಾಂಕ: ೨೫-೦೭-೨೦೨೫
ಇಲಕಲ್ಲ: ಸ್ಥಳೀಯ ಶ್ರೀ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಶ್ರೀ ವಿಜಯ ಮಹಾಂತೇಶ ಕಲೆ ಹಾಗೂ ವಾಣಿಜ್ಯ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ವ್ಯಸನಮುಕ್ತ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಜಿ. ಎನ್. ಕನ್ನೊಳ್ಳಿ, ಆಯುರ್ವೇದ ವೈದ್ಯರು, ಆರ್. ಪಿ. ಕರಡಿ ಆಯುರ್ವೇದ ಆಸ್ಪತ್ರೆ, ಇಲಕಲ್ಲ. ಅವರು ವ್ಯಸನಮುಕ್ತ ದಿನಾಚರಣೆ ಅಂಗವಾಗಿ ವ್ಯಸನದಿಂದಾಗುವ ಆರೋಗ್ಯ ಸಮಸ್ಯೆಗಳು ಮತ್ತು ಅದರಿಂದ ಸಮಾಜದ ಮೇಲಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಚೇರಮನ್ನರಾದ ಶ್ರೀ ಬಿ.ಎಂ. ಕಬ್ಬಿಣದ ಅವರು ಸಾಂದರ್ಭಿಕವಾಗಿ ಮಾತನಾಡುತ್ತಾ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಯುವಕರು ಮುಂದಾಗಬೇಕು ಎಂದು ಕರೆಕೊಟ್ಟರು. ವ್ಯಸನದಿಂದ ವ್ಯಕ್ತಿಯ ಜೀವನ ಮತ್ತು ಸಮಾಜಕ್ಕೆ ಆಗುವ ನಷ್ಟವನ್ನು ತಡೆಗಟ್ಟಬೇಕು ಎಂದು ತಿಳಿಸಿದರು.
ಕಾಲೇಜಿನ ಪ್ರಾಚಾರ್ಯರಾದ ಶ್ರೀ. ಬಿ. ಬಿ. ಸುಗ್ಗಮದ ಅವರು ಅತಿಥಿಗಳ ಪರಿಚಯ ಮಾಡಿಕೊಟ್ಟರು. ವೇದಿಕೆಯ ಮೇಲೆ ಐ.ಕ್ಯೂ.ಎ.ಸಿ ಸಂಯೋಜಕರಾದ ಪ್ರೊ. ಪಿ. ಆರ್. ಪಾಟೀಲ ಹಾಗೂ ಎನ್.ಎಸ್.ಎಸ್ ಅಧಿಕಾರಿಗಳಾದ ಪ್ರೊ. ಎಂ. ಎನ್. ಗೌಡರ ಅವರು ಉಪಸ್ಥಿತರಿದ್ದರು.
