25 Aug 2026

ಇಳಕಲ್ ಎಸ್.ವಿ.ಎಂ. ಮಹಿಳಾ ಕಾಲೇಜಿನಲ್ಲಿ 80ನೇ ಸ್ವಾತಂತ್ರ‍್ಯ ದಿನಾಚರಣೆ


ಇಳಕಲ್‌ನ ಎಸ್.ವಿ.ಎಂ. ಕಲೆ ಹಾಗೂ ವಾಣಿಜ್ಯ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ೮೦ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ದೇಶಭಕ್ತಿ ಹಾಗೂ ಸಂಭ್ರಮದಿAದ ಆಚರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಬಿ. ಬಿ. ಸುಗ್ಗಮದ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಸ್ವಾತಂತ್ರ‍್ಯದ ಮಹತ್ವ ಹಾಗೂ ದೇಶಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನದ ಕುರಿತು ಮಾತನಾಡಿದರು. ಇದೇ ಸಂದರ್ಭದಲ್ಲಿ ‘ವಂದೇ ಮಾತರಂ’ ಗೀತೆಯ ಮಹತ್ವವನ್ನು ತಿಳಿಸಿದರು. ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಎನ್‌ಎಸ್‌ಎಸ್ ಗೀತೆಯನ್ನು ಪ್ರಸ್ತುತಪಡಿಸಿದರು.
ನಂತರ ಎಸ್.ವಿ.ಎಂ.ವಿ.ವಿ. ಸಂಘದ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಮುಖ್ಯಸ್ಥರು, ಪದಾಧಿಕಾರಿಗಳು ಹಾಗೂ ಗಣ್ಯರು ಆರ್. ವೀರಮಣಿ ಕ್ರೀಡಾಂಗಣದಲ್ಲಿ ನಡೆದ ಸಾಮೂಹಿಕ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಡಾ. ಗುರು ಮಹಾಂತ ಸ್ವಾಮೀಜಿ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಗುರು ಮಹಾಂತ ಸ್ವಾಮೀಜಿಯವರು, ಭಾರತದ ಸ್ವಾತಂತ್ರ‍್ಯಕ್ಕಾಗಿ ಶ್ರಮಿಸಿದ ಮಹನೀಯರನ್ನು ಸ್ಮರಿಸಿದರು. ಸ್ವಾತಂತ್ರ‍್ಯ ಪೂರ್ವದಲ್ಲಿ ಗೋಕಾಕ್‌ನಲ್ಲಿ ನಡೆದ ಒಂದು ಘಟನೆಯನ್ನು ನೆನಪಿಸಿಕೊಂಡು ಭಾವುಕರಾದರು. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಸದೃಢ ದೇಹ ಮತ್ತು ಆರೋಗ್ಯಕರ ಮನಸ್ಸನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಂಗವಾಗಿ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು, ನೃತ್ಯ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಸ್ತುತಪಡಿಸಲ್ಪಟ್ಟವು. ವಿದ್ಯಾರ್ಥಿಗಳ ಪ್ರತಿಭೆ ಮತ್ತು ದೇಶಭಕ್ತಿಯ ಪ್ರದರ್ಶನ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.

Download