09 Sep 2026

ವಿದ್ಯಾರ್ಥಿನಿಯರ ನೇತೃತ್ವದಲ್ಲಿ ವಿಶಿಷ್ಟ ಶಿಕ್ಷಕರ ದಿನಾಚರಣೆ

ಇಳಕಲ್ಲ, ಸೆ. ೪: ಶ್ರೀ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಶ್ರೀ ವಿಜಯ ಮಹಾಂತೇಶ ಕಲೆ ಹಾಗೂ ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಸೆ. ೪ರಂದು ಎಸ್.ಆರ್. ಕಂಠಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಕಾರ್ಯಕ್ರಮದ ವಿಶೇಷವೆಂದರೆ ಮಹಾವಿದ್ಯಾಲಯದ ವಿದ್ಯಾರ್ಥಿನಿಯರೇ ತಮ್ಮ ಸ್ವಂತ ಆಲೋಚನೆ ಹಾಗೂ ಅಭಿಪ್ರಾಯಗಳ ಆಧಾರದ ಮೇಲೆ ಕಾರ್ಯಕ್ರಮದ ಸಂಪೂರ್ಣ ರೂಪರೇಷೆ ಸಿದ್ಧಪಡಿಸಿ, ವಿವಿಧ ಜವಾಬ್ದಾರಿಗಳನ್ನು ಹಂಚಿಕೊAಡು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಶಿಕ್ಷಕರ ಮಾರ್ಗದರ್ಶನದೊಂದಿಗೆ ವಿದ್ಯಾರ್ಥಿನಿಯರೇ ಕಾರ್ಯಕ್ರಮದ ಯೋಜನೆ, ನಿರೂಪಣೆ, ಸ್ವಾಗತ, ಅತಿಥಿಗಳ ಪರಿಚಯ, ಅನಿಸಿಕೆ, ಬಹುಮಾನ ವಿತರಣೆ ಹಾಗೂ ವಂದನಾರ್ಪಣೆ ಸೇರಿದಂತೆ ವಿವಿಧ ಕಾರ್ಯಗಳನ್ನು ನಿರ್ವಹಿಸಿದ್ದು ಗಮನ ಸೆಳೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿ ಅಧ್ಯಕ್ಷ ಶ್ರೀ ಬಸವರಾಜ ವಿ. ಮರಟದ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಧನ್ನೂರಿನ ಸರಕಾರಿ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ವಿಭಾಗದ ಉಪನ್ಯಾಸಕ ಶ್ರೀ ಬಾಹುಬಲಿ ಕೋಲಾರ ಹಾಗೂ ಅತಿಥಿಗಳಾಗಿ ಎಸ್.ಆರ್. ಕಂಠಿ ಶಿಕ್ಷಣ ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಶ್ರೀ ಕಿರಣ ಬಿಜ್ಜಳ ಉಪಸ್ಥಿತರಿದ್ದರು.
ಮಹಾವಿದ್ಯಾಲಯದ ಪ್ರಾಚಾರ್ಯ ಶ್ರೀ ಬಸವರಾಜ ಬಿ. ಸುಗ್ಗಮದ, ಐಕ್ಯೂಎಸಿ ಸಂಚಾಲಕ ಶ್ರೀ ಪಿ.ಆರ್. ಪಾಟೀಲ, ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಎ.ಎಸ್. ಕೂಡ್ಲೆಪ್ಪನವರ, ಸಾಂಸ್ಕೃತಿಕ ವಿಭಾಗದ ಸಂಚಾಲಕಿ ಶ್ರೀಮತಿ ಎಸ್.ಆರ್. ಕಲ್ಯಾಣಶೆಟ್ಟಿ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಕುಮಾರಿ ಪ್ರತಿಭಾ ಮುರೋಳ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಕುಮಾರಿ ಸಂಗೀತಾ ಸ್ವಾಗತಿಸಿ ಪುಷ್ಪಾರ್ಪಣೆ ನೆರವೇರಿಸಿದರು. ಕುಮಾರಿ ಆಫೀಯಾ ಭಾಗವಾನ ಮುಖ್ಯ ಅತಿಥಿಗಳ ಪರಿಚಯ ಮಾಡಿದರು. ಕುಮಾರಿ ಬಸಮ್ಮ ಹಾಗೂ ಕುಮಾರಿ ಸಂಪದಾ ಮುಳಗುಂದ ಶಿಕ್ಷಕರ ದಿನಾಚರಣೆಯ ಕುರಿತು ವಿದ್ಯಾರ್ಥಿ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಆಂಗ್ಲ ಭಾಷಾ ಉಪನ್ಯಾಸಕ ಪ್ರೊ. ಟಿ.ಎಂ. ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿ ಶ್ರೀ ಬಾಹುಬಲಿ ಕೋಲಾರ ಶಿಕ್ಷಕರ ದಿನಾಚರಣೆಯ ಮಹತ್ವ ಹಾಗೂ ಶಿಕ್ಷಕರ ಜವಾಬ್ದಾರಿಗಳ ಕುರಿತು ಮಾತನಾಡಿ, ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದರು. ಬಳಿಕ ಅವರನ್ನು ಗಣ್ಯರು ಸನ್ಮಾನಿಸಿ ಗೌರವಿಸಿದರು.
ಅತಿಥಿ ಶ್ರೀ ಕಿರಣ ಬಿಜ್ಜಳ ವಿದ್ಯಾರ್ಥಿ–ಶಿಕ್ಷಕರ ನಡುವಿನ ಉತ್ತಮ ಬಾಂಧವ್ಯದ ಮಹತ್ವವನ್ನು ವಿವರಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಹಿಂದಿನ ದಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಾಗಿ ಆಯೋಜಿಸಿದ್ದ ವಿವಿಧ ಮನರಂಜನಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕುಮಾರಿ ಸಿಂಧು ದೊಡ್ಡನಗೌಡರ ಬಹುಮಾನ ವಿತರಣಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಕಾರ್ಯಕ್ರಮದ ನಿರೂಪಣೆಯನ್ನು ಕುಮಾರಿ ಸಂಪದಾ ಮುಳಗುಂದ ಹಾಗೂ ಕುಮಾರಿ ಮೇಘನಾ ಪತ್ತಾರ ಅಚ್ಚುಕಟ್ಟಾಗಿ ನಿರ್ವಹಿಸಿದರು. ಕುಮಾರಿ ಜ್ಯೋತಿ ವಂದನಾರ್ಪಣೆ ಸಲ್ಲಿಸಿದರು.
ವಿದ್ಯಾರ್ಥಿನಿಯರೇ ಕಾರ್ಯಕ್ರಮದ ಯೋಜನೆ ಮತ್ತು ನಿರ್ವಹಣೆಯ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿರುವುದು ವಿದ್ಯಾರ್ಥಿ ಕೇಂದ್ರಿತ ಶಿಕ್ಷಣಕ್ಕೆ ಉತ್ತಮ ಮಾದರಿಯಾಗಿದ್ದು, ಅವರಲ್ಲಿ ನಾಯಕತ್ವ, ಸಂಘಟನಾ ಕೌಶಲ್ಯ, ಆತ್ಮವಿಶ್ವಾಸ ಹಾಗೂ ಸೃಜನಶೀಲತೆಯನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯಕ್ರಮ ಯಶಸ್ವಿಯಾಯಿತು.

Download