02 Sep 2025

ಮಹಾವಿದ್ಯಾಲಯದಲ್ಲಿ ೨೦೨೫-೨೬ ನೇ ಸಾಲಿನ ವಿದ್ಯಾರ್ಥಿ ಒಕ್ಕೂಟ ಉದ್ಘಾಟನಾ ಸಮಾರಂಭ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ. ದಿನಾಂಕ: ೦೧-೦೯-೨೦೨೫

ಮಹಾವಿದ್ಯಾಲಯದಲ್ಲಿ ೨೦೨೫-೨೬ ನೇ ಸಾಲಿನ ವಿದ್ಯಾರ್ಥಿ ಒಕ್ಕೂಟ ಉದ್ಘಾಟನಾ ಸಮಾರಂಭ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ.
ದಿನಾಂಕ: ೦೧-೦೯-೨೦೨೫

ಇಲಕಲ್ಲ: ಸ್ಥಳೀಯ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಶ್ರೀ ವಿಜಯ ಮಹಾಂತೇಶ ಕಲೆ ಹಾಗೂ ವಾಣಿಜ್ಯ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ೨೦೨೫-೨೬ ನೇ ಸಾಲಿನ ಬಿ.ಎ ಮತ್ತು ಬಿ.ಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ವಿದ್ಯಾರ್ಥಿ ಒಕ್ಕೂಟ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತç ಉಪನ್ಯಾಸಕರಾದ ಶ್ರೀ ಲಾಲಸಾಬ ಹೆಚ್ ಬಾಗೇವಾಡಿಯವರು ಪ್ರಸ್ತುತ ದಿನಮಾನದಲ್ಲಿ ಎ.ಐ ತಂತ್ರಜ್ಞಾನವು ಕಲಿಕೆಗೆ ಮುಕ್ತ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಅದನ್ನು ಬಳಸಿಕೊಂಡು ವಿದ್ಯಾರ್ಥಿಗಳು ಕುಟುಂಬ ಮತ್ತು ಸಮಾಜಕ್ಕೆ ಶಕ್ತಿಯಾಗಬೇಕೆಂದು ಹೇಳಿದರು.
ಒಕ್ಕೂಟ ಉದ್ಘಾಟನಾ ಸಮಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಬಿ. ಬಿ. ಸುಗ್ಗಮದ ಅವರು ವಿದ್ಯಾರ್ಥಿಗಳಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಕಟ್ಟಿಕೊಡುವಲ್ಲಿ ಕಾಲೇಜು ಒಕ್ಕೂಟವು ಪೂರಕವಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವ ರೂಪಗೊಳಿಸುವುದರಲ್ಲಿ ಸಹಾಯಕವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಚೇರಮನ್ನರಾದ ಶ್ರೀ ಬಿ.ಎಂ. ಕಬ್ಬಿಣದ ಅವರು ಸಾಂದರ್ಭಿಕವಾಗಿ ಮಾತನಾಡುವುದರ ಜೊತೆಗೆ ವರ್ಷದುದ್ದಕ್ಕೂ ನಡೆಯುವ ಶೈಕ್ಷಣಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕೆಂದು ಹೇಳಿ, ಪ್ರಥಮ ವರ್ಷದ ಬಿಎ ಮತ್ತು ಬಿಕಾಂ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಐ.ಕ್ಯೂ.ಎ.ಸಿ ಸಂಯೋಜಕರಾದ ಪ್ರೊ. ಪಿ. ಆರ್. ಪಾಟೀಲ, ವಿದ್ಯಾರ್ಥಿ ಒಕ್ಕೂಟದ ಕಾರ್ಯಾಧ್ಯಕ್ಷರಾದ ಪ್ರೊ. ಶ್ರೀಮತಿ ಎ. ಸಿ. ದಟ್ಟಿ, ವಿದ್ಯಾರ್ಥಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿಗಳಾದ ಕು. ವಿದ್ಯಾ ಹೊಸೂರ ಹಾಗೂ ಕು. ಸುಮೇರಾ ಉಪಸ್ಥಿತರಿದ್ದರು.
ಕು. ಪಿ. ಪ್ರಿಯಾಂಕಾ ಪ್ರಾರ್ಥಿಸಿದರು. ಕು. ಸುಮೇರಾ ಸ್ವಾಗತ ಮತ್ತು ಪುಷ್ಪಾರ್ಪಣೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕು. ಸಹನಾ ಸಿಂಗಶೆಟ್ಟಿ ಮುಖ್ಯ ಅತಿಥಿಗಳ ಪರಿಚಯ ಮಾಡಿದರು. ಕು. ಶಾಫೀನಾ ಹೊಸಮನಿ ಬಹುಮಾನ ವಿತರಣೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು ಹಾಗೂ ಕು. ಭಾಗ್ಯಶ್ರೀ ಮತ್ತು ಕು. ಸಂಪದಾ ಮುಳಗುಂದ ಕಾರ್ಯಕ್ರಮವನ್ನು ನಿರೂಪಿಸಿದರು. ಕು. ಶರಣಮ್ಮ ಹಿರೇಮಠ ವಂದಿಸಿದರು.

Download